ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಬೊಳ್ಳಂತಿಮೊಗೇರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಮಾಮೇಶ್ವರ ಒಕ್ಕೂಟ ಕಾರ್ಯಕ್ಷೇತ್ರದ ಬೊಳ್ಳಂತಿಮೊಗೇರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಭಟ್ಯಪ್ಪ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣ ಶೆಟ್ಟಿ ಪ್ರಾಸ್ತಾವಿಕದೊಂದಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಯುತ ಬಾಲಕೃಷ್ಣ ಕಾರಂತ್ ಎರುಂಬು, ಹೈಸ್ಕೂಲ್ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಹೈಸ್ಕೂಲ್ ಮಟ್ಟದಲ್ಲಿ ಮಕ್ಕಳು ಯಾವ ಯಾವ ರೀತಿಯಲ್ಲಿ ದುಶ್ಚಟಕ್ಕೆ ಒಳಗಾಗುತ್ತಾರೆ ಎಂಬುದಾಗಿ ಸವಿವರವಾಗಿ ಮಕ್ಕಳಿಗೆ ಮನವರಿಕೆ ಮಾಡಿ ಮಕ್ಕಳಿಂದ ಯಾವುದೇ ರೀತಿಯ ದುಶ್ಚಟಕ್ಕೆ ಒಳಗಾಗುವುದಿಲ್ಲ ಎಂಬುದಾಗಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. ಮಾಮೇಶ್ವರ ಒಕ್ಕೂಟದ ಸೇವ ಪ್ರತಿನಿಧಿ ಶ್ರೀಮತಿ ಯಶೋಧ ಸ್ವಾಗತಿಸಿ, ರಾಮಣ್ಣ ಸರ್ ವಂದಿಸಿದರು.