ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಶಂಕುಸ್ಥಾಪನೆ : 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ನಳಿನ್ ಕುಮಾರ್ ಕಟೀಲ್ ಸಾಥ್ – ಕಹಳೆ ನ್ಯೂಸ್
ದುಷ್ಕರ್ಮಿಗಳಿದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿದೆ. ರಾಜ್ಯ ಬಿಜೆಪಿ ಮತ್ತು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 60 ಲಕ್ಷ ವೆಚ್ಚದ ಮನೆ ನಿರ್ಮಾಣವಾಗಲಿದ್ದು. ಪೂಜೆ ನೆರವೇರಿಸಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 2,700 ಚ.ಅಡಿಯ ನೂತನ ಮನೆಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ ಹೊಸ ಮನೆ ನಿರ್ಮಾಣವಾಗಲಿದ್ದು, ಮೊಗರೋಡಿ ಕನ್ಸ್ಸ್ಟ್ರಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿವಹಿಸಿ, ಮೇ ಅಂತ್ಯದ ಒಳಗೆ ಮನೆ ನಿರ್ಮಾಣ ಮಾಡಿ ಕೊಡಲಿದೆ. ಇಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಎಸ್.ಅಂಗಾರ, ಶಾಸಕ ಸಂಜೀವ ಮಠಂದೂರು ಹಾಗೂ ಹಲವರು ಭಾಗಿಯಾಗಿದ್ರು.
ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಪ್ರವೀಣ್ ಕನಸು ನನಸು ಮಾಡಲು ಪಕ್ಷ ಹೆಜ್ಜೆ ಇಟ್ಟಿದೆ. ಅವರ ಹಳೆಯ ಮನೆ ಕೆಡವಿ ಇಂದು ಹೊಸ ಮನೆಗೆ ಗುದ್ದಲಿ ಪೂಜೆ ಮಾಡಿದ್ದೇವೆ. ಈಗಾಗಲೇ ಪ್ರವೀಣ್ ಪತ್ನಿಗೆ ಡಿಸಿ ಕಚೇರಿಯಲ್ಲಿ ಕೆಲಸ ಸಿಕ್ಕಿದೆ. ಬಿಜೆಪಿಯಿಂದ 25 ಲಕ್ಷ, ಸರ್ಕಾರ 25 ಲಕ್ಷ ಹಾಗೂ ಯುವಮೋರ್ಛಾ 15 ಲಕ್ಷ ಕೊಟ್ಟಿದೆ. ಪ್ರವೀಣ್ ನಮ್ಮ ಒಂದೊಳ್ಳೆ ಕಾರ್ಯಕರ್ತ, ಅವನ ಕುಟುಂಬದ ಜೊತೆ ನಾವು ನಿಂತಿದ್ದೇವೆ. ಅವನ ಕೆಲಸಕ್ಕೆ ಮೌಲ್ಯ ಕಟ್ಟಲು ಸಾಧ್ಯವೇ ಇಲ್ಲ, ಹಾಗಾಗಿ ಇಲ್ಲಿ ಹಣ ಮುಖ್ಯವಲ್ಲ. ಬಿಜೆಪಿ ಪಕ್ಷ ಕಾರ್ಯಕರ್ತನ ಕುಟುಂಬದ ಪರ ನಿಲ್ಲಲಿದೆ. ನಾವು ಹತ್ಯೆಯಾದ ವೇಳೆಯೇ ಕುಟುಂಬದ ಜೊತೆ ನಿಲ್ಲುವ ಭರವಸೆ ಕೊಟ್ಟಿದ್ದೆವು. ಅವನು ಪಕ್ಷಕ್ಕೆ ಸಾಕಷ್ಟು ಸಮಯ ಕೊಟ್ಟಿದ್ದ, ಹಾಗಾಗಿ ಪಕ್ಷ ಅವನ ಕುಟುಂಬದ ಪರ ನಿಂತಿದೆ. ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಈ ಮನೆ ನಿರ್ಮಾಣ ಆಗ್ತಿದೆ. ಹಲವಾರು ಮಂದಿ ಮನೆ ಕಟ್ಟಿ ಕೊಡಲು ಮುಂದೆ ಬಂದಿದ್ದರು. ಆದರೆ ಅವರ ಮನೆಯವರ ಅಭಿಪ್ರಾಯದಂತೆ ಪಕ್ಷವೇ ಮನೆ ಕಟ್ಟಿ ಕೊಡ್ತಾ ಇದೆ. ಇಡೀ ಮನೆಯ ವೆಚ್ಚವನ್ನು ಬಿಜೆಪಿ ಪಕ್ಷ ಕೊಡ್ತದೆ.
ಇನ್ನು ಈಗಾಗಲೇ ಆರೋಪಿಗಳ ಬಂಧನ ಆಗಿದೆ, ಆರ್ಥಿಕ ಸಹಕಾರ ಕೊಟ್ಟವರಿಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸರಿಯಾದ ತನಿಖೆ ಮಾಡ್ತಿದೆ. ಇದರ ಹಿಂದೆ ಇರೋ ಎಲ್ಲಾ ಶಕ್ತಿಗಳನ್ನು ಬಂಧಿಸೋ ಕೆಲಸ ಆಗ್ತಿದೆ. ಪ್ರಮುಖ ಆರೋಪಿಗಳು ಜೈಲಿನ ಒಳಗೆ ಇದ್ದಾರೆ. ಆರ್ಥಿಕ, ವಾಹನ ಕೊಟ್ಟವರು, ಮಾನಸಿಕವಾಗಿ ಆರೋಪಿಗಳ ಜೊತೆ ನಿಂತವರನ್ನೂ ಬಿಡಲ್ಲ. ಇದಕ್ಕಾಗಿ ಎನ್ಐಎ ತಪ್ಪಿಸಿಕೊಂಡವರ ಪತ್ತೆಗೆ ಬಹುಮಾನ ಘೋಷಿಸಿದೆ. ಈಗಾಗಲೇ ಪ್ರವೀಣ್ ಹತ್ಯೆ ಬಳಿಕ ಪಿಎಫ್ಐ ನಿಷೇಧ ಆಗಿದೆ. ಸದ್ಯ ಹತ್ಯೆ ಕೇಸ್ ಆರೋಪಿಗಳು ಯಾವ ಕೋರ್ಟ್ ನಲ್ಲೂ ಹೊರ ಬರದ ಹಾಗೆ ಪ್ರಕರಣ ದಾಖಲಿಸಲಾಗಿದೆ. ಎನ್ಐಎ ಇದಕ್ಕೆ ಸಂಬAಧಿಸಿ ಎಲ್ಲಾ ರೀತಿಯ ಕೆಲಸ ಮಾಡ್ತಿದೆ ಎಂದಿದ್ದಾರೆ.