Tuesday, January 28, 2025
ಸುದ್ದಿ

ಉಡುಪಿ :ಹೊಳಪು-2022- ಕ್ರೀಡಾಕೂಟ : ಲಾಂಛನ ಅನಾವರಣ – ಕಹಳೆ ನ್ಯೂಸ್

ಕೋಟ :ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ನಡೆಯುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕೂಟ ಹೊಳಪು – 2022 (ಜನಾಧಿಕಾರದ ಸಂಚಲನ) ಕಾರ್ಯಕ್ರಮದ ಲಾಂಛನವನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕೊಡ್ಗಿ ಅವರು ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಅನಾವರಣಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲಾಂಛನ ಅನಾವರಣಗೊಳಿಸಿ ಮಾತನಾಡಿದ ಶ್ರೀ ಕಿರಣ್ ಕೊಡ್ಗಿಯವರು ಜನಪ್ರತಿನಿಧಿಗಳು ದಿನ ನಿತ್ಯ ರಾಜಕೀಯ – ಸರಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಒತ್ತಾಡದಿಂದ ಇರುತ್ತಾರೆ ಅವರು ಸಂಭ್ರಮದಿಂದ ಭಾಗವಹಿಸಲು ಇದೊಂದು ವೇದಿಕೆ, ಇಂತಹ ಕ್ರೀಡಾ ಕೂಟಗಳು ಪಂಚಾಯತ್‌ ರಾಜ್ ವ್ಯವಸ್ಥೆಯ ವಿಕೇಂದ್ರಿಕರಣಕ್ಕೆ ಒಂದು ಹೆಜ್ಜೆಯಾಗಲಿದೆ ಎಂದರು.

ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಶ್ರೀ ಆನಂದ್ ಸಿ ಕುಂದರ್ ಅವರು ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟೂ ಗಟ್ಟಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು ಪಕ್ಷ ಭೇದ ಮರೆತು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 6೦೦೦ಕ್ಕೂ ಹೆಚ್ಚು ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮ ನವೆಂಬರ್ 26ರಂದು ಕೋಟದ ವಿವೇಕ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ಶ್ರೀ ರಾಜು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಪಂಚಾಯತ್ ಅಧಿಕಾರಿ ವರ್ಗ, ಥೀಮ್ ಪಾರ್ಕ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೆಂದ್ರ ಕುಮಾರ್ ನಿರೂಪಿಸಿ, ಸಚಿವರ ಆಪ್ತ ಸಹಾಯಕ ಶ್ರೀ ಹರೀಶ್ ಕುಮಾರ್ ಶೆಟ್ಟಿ ವಂದಿಸಿದರು.