Friday, January 24, 2025
ಸುದ್ದಿ

ತ್ರೋಬಾಲ್ ಪಂದ್ಯಾಟದಲ್ಲಿ ರಾಷ್ಟಮಟ್ಟಕ್ಕೆ ಆಯ್ಕೆಯಾದ ಇಳಂತಿಲ ಗ್ರಾಮದ ಅನ್ವಿ. ಆರ್. ಆಚಾರ್ಯ –ಕಹಳೆ ನ್ಯೂಸ್

ಉಪ್ಪಿನಂಗಡಿ : ಗುಲ್ಬರ್ಗ ದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅನ್ವಿ. ಆರ್. ಆಚಾರ್ಯ ಉತ್ತಮ ಪ್ರದರ್ಶನ ನೀಡಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದು, ಇವರೊಂದಿಗೆ ಇನ್ನೂ ಹಲವು ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಅನ್ವಿ. ಆರ್. ಆಚಾರ್ಯ ಇಳಂತಿಲ ಗ್ರಾಮದ ರಮೇಶ್ ಆಚಾರ್ಯ ಮತ್ತು ಸುಪ್ರಿಯಾ ಆಚಾರ್ಯ ದಂಪತಿಗಳ ಪುತ್ರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು