Wednesday, January 22, 2025
ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗ ಹಾಗೂ ಹಿಂದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ರಜತ ಮಹೋತ್ಸವ ಸಭಾಭವನದಲ್ಲಿ ಹಿಂದಿ ದಿವಸ್ ನ್ನು ಆಚರಿಸಲಾಯಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ಹಿಂದಿ ಸಂಘದ ಪ್ರಸಕ್ತ ಸಾಲಿನ ಚಟುವಟಿಕೆಗಳನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್‍ರವರು ಪ್ರಪಂಚದಲ್ಲಿ ಅರ್ಧ ಮಿಲಿಯದಷ್ಟು ಜನರು ಹಿಂದಿ ಭಾಷೆಯಲ್ಲಿ ಸಂವಹನ ನಡೆಸುತ್ತಾರೆ. ಹಿಂದಿ ಭಾಷೆಯ ಮಹತ್ವವು ನಮ್ಮೆಲ್ಲರಿಗೂ ಅರಿವಿರಬೇಕೆಂಬ ಸದುದ್ದೇಶದಿಂದ ಹಿಂದಿ ದಿವಸ್ ಆಚರಿಸಲಾಗುತ್ತಿದೆ.

ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ರಚನಾತ್ಮಕ ಲೇಖನಗಳನ್ನು ಬರೆಯುವ ಮೂಲಕ ಕಾಲೇಜಿನ ವಾರ್ಷಿಕ ಸಂಚಿಕೆ ಹಾಗೂ ಭಿತ್ತಿಪತ್ರಿಕೆಗಳಲ್ಲಿ ಪ್ರಕಟಿಸುವಂತಾಗಬೇಕು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋರವರು ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಅಂದವಿದೆ. ಬಾಷೆಯನ್ನು ಉಪಯೋಗಿಸುವುದರ ಮೂಲಕ ಭಾಷೆಯ ಮೇಲೆ ಪ್ರಭುತ್ವವನ್ನು ಸಾಧಿಸಲು ವಿಪುಲ ಅವಕಾಶಗಳಿವೆ. ಹೊಸ ಭಾಷೆಯ ಕಲಿಕೆಯು ಹೊಸ ಅನುಭವದ ಪ್ರತೀಕ ಎಂದು ನುಡಿದರು. ಹಿಂದಿ ವಿಭಾಗದ ಪ್ರಾಧ್ಯಾಪಕಿ ಡಿಂಪಲ್ ತಾವ್ರೋರವರು ಹಿಂದಿ ಭಾಷೆಯ ಪ್ರಾಮುಖ್ಯತೆಯ ಬಗ್ಗೆ ಸುವಿಸ್ತಾರವಾಗಿ ಮಾಹಿತಿ ನೀಡಿದರು.

ವಿದ್ಯಾರ್ಥಿ ಪ್ರತಿನಿಧಿ ಕಾರ್ತಿಕ್ ಸ್ವಾಗತಿಸಿ ಲೋಕೇಂದರ್ ಸಿಂಗ್ ವಂದಿಸಿದರು. ದಿಶಾ ಹಾಗೂ ಪ್ರೇಮ್ ಕರುಣಾಕರ್ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ| ಡಿಂಪಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ಹಿಂದಿ ಸಂಘದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.