Tuesday, January 21, 2025
ದಕ್ಷಿಣ ಕನ್ನಡಪುತ್ತೂರುಹೆಚ್ಚಿನ ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮ

ಸಂತ ಫಿಲೋಮಿನಾಕಾಲೇಜಿನಲ್ಲಿ ಕನ್ನಡರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕನ್ನಡಿಗರಾದ ನಮಗೆ ಕನ್ನಡ ಭಾಷೆಯ ಪ್ರಜ್ಞೆ ಮುಖ್ಯ.ಕನ್ನಡ ನಾಡು – ನುಡಿಯಕುರಿತುಅಭಿಮಾನ ಮುಖ್ಯ. ಎಲ್ಲ ಸದ್ವಿಚಾರ ಸ್ವೀಕರಿಸುವ ಮನೋವೃತ್ತಿಯವರಾಗಿರುವ ನಾವು ಕನ್ನಡ ಉಳಿಸಬೇಕು ಎನ್ನುವ ಉದ್ದೇಶದಿಂದ ಅನ್ಯ ಭಾಷೆ–ದ್ವೇಷಿಸಬಾರದು. ಭಾಷೆಯ ಉಳಿವಿಗಾಗಿ ನಾವು ಪ್ರಯತ್ನಿಸಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯಎಂದು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಬಸ್ತ್ಯಾಂ ಪಾಯಸ್ ಹೇಳಿದರು.
ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘ, ಯಕ್ಷಕಲಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಕನ್ನಡರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾದ ಕನ್ನಡ ನಾಡು – ನುಡಿಚಿಂತನೆ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲರಾದ ಪ್ರೊ.ಗಣೇಶ್ ಭಟ್.ಕೆ. ಮಾತನಾಡಿಕನ್ನಡ ಸಾಹಿತ್ಯಕ್ಕೆ ಕರಾವಳಿ ಸಾಹಿತಿಗಳ ಕೊಡುಗೆಯನ್ನು ಸ್ಮರಿಸಿದರು. ಆಧುನಿಕಕಂಪ್ಯೂಟರ್‍ಯುಗದಲ್ಲಿ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯಕ್ಕೆ ಹೆಚ್ಚಿನಕೊಡುಗೆ ನೀಡಬೇಕುಎಂದರು. ಯಕ್ಷ ಕಲಾ ಕೇಂದ್ರದ ನಿರ್ದೇಶಕ ಪ್ರೊ.ಪ್ರಶಾಂತ್‍ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥಡಾ| ವಿಜಯಕುಮಾರ ಮೊಳೆಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸುದರ್ಶನ್ ಸ್ವಾಗತಿಸಿ, ಹೇಮಾ ವಂದಿಸಿದರು.ಸ್ಮಿತಾ ಎಸ್. ರೈಕಾರ್ಯಕ್ರಮ ನಿರ್ವಹಿಸಿದರು. ಯಕ್ಷ ಕಲಾ ಕೇಂದ್ರದ ವಿದ್ಯಾರ್ಥಿಗಳು ಕನ್ನಡ ಹಾಡುಗಳನ್ನು ಹಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು