Saturday, January 25, 2025
ಸುದ್ದಿ

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿ ಚರಣ್ ಕುಮಾರ್ ರಾಷ್ಟ್ರ ಮಟ್ಟದ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ)- 3 ಕಿಲೋಮೀಟರ್ ನಡಿಗೆ -ಪ್ರಥಮ, 3000 ಮೀಟರ್ -ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾನೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು