Recent Posts

Monday, January 27, 2025
ಸುದ್ದಿ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬಿದಿರೆ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ – ಕಹಳೆ ನ್ಯೂಸ್

ಮೂಡುಬಿದಿರೆ: ತಾಲ್ಲೂಕು ಮಟ್ಟದ ಕ್ರೀಡಾಕೂಟ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬಿದಿರೆ ಇವರ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ಕಲ್ಲಬೆಟ್ಟುವಿನ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ನಿ.ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಪಿ.ಸುಚರಿತ ಶೆಟ್ಟಿಯವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಶಾಂತಿಯ ಸಂಕೇತವಾಗಿ ಶ್ವೇತ ಬಲೂನ್ ಗಳನ್ನು ಗಾಳಿಯಲ್ಲಿ ಹಾರ ಬಿಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ನಿಮ್ಮ ಪಥ ಸಂಚಲನದ ಹೆಜ್ಜೆ ನಿಮ್ಮ ಬದುಕಿಗೆ ಮಾರ್ಗವಾಗಬೇಕು ಸೋಲೇ ಗೆಲುವಿನ ಸೋಪಾನ ಎಂದು ಹೇಳುತ್ತಾ ಸಮಚಿತ್ತದ ಕ್ರೀಡಾ ಭಾವನೆಯನ್ನು ಕ್ರೀಡಾಪಟುಗಳು ಹೊಂದಬೇಕು ಎಂದರು. ಪಥ ಸಂಚಲನದ ಗೌರವ ಸ್ವೀಕರಿಸಿ ಮಾತನಾಡಿದ ಮೂಡಬಿದಿರೆಯ ಪುರಸಭೆ ಅಧ್ಯಕ್ಷಾರದ ಶ್ರೀ ಪ್ರಸಾದ್ ಕುಮಾರ್ ಕ್ರೀಡೆ ಇಲ್ಲದೆ ನಮ್ಮ ಜೀವನವಿಲ್ಲ ನಮ್ಮ ಶರೀರ ಸದೃಢವಾಗಬೇಕಾದರೆ ಜೀವನದಲ್ಲಿ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು ಅದರಿಂದ ನಾಯಕತ್ವದ ಗುಣಗಳು ಬೆಳಯುತ್ತವೆ ಅಂತಹ ಉತ್ತಮ ನಾಯಕರುಗಳು ನೀವಾಗಿ ಎಂದರು. ಮುಖ್ಯ ಅತಿಥಿಯಾಗಿದ್ದ ಮೂಡಬಿದಿರೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವೈ ಗಣೇಶ್ ಮಾತನಾಡಿ ಆಟ ಖುಷಿಯನ್ನು ನೀಡುತ್ತದೆ. ಕ್ರೀಡಾ ಸ್ಪೂರ್ತಿಯಿಂದ ಆಟದಲ್ಲಿ ಭಾಗವಹಿಸಿ ಎಲ್ಲರಿಗೂ ನಿಮ್ಮ ಆಟ ಸ್ಪೂರ್ತಿಯಾಗಲಿ ಎಂದರು. ಕ್ರೀಡಾಕೂಟದ ಧ್ವಜಾರೋಹಣ ಮಾಡಿ ಮಾತನಾಡಿದ ಮಾಜಿ ಸಚಿವರು ಕರ್ನಾಟಕ ಸರ್ಕಾರ ಎಕ್ಸಲೆಂಟ್ ಸಮೂಹ ವಿದ್ಯಾಸಂಸ್ಥೆಗಳ ಗೌರವಾಧ್ಯಕ್ಷರಾದ ಶ್ರೀ ಅಭಯಚಂದ್ರ ಜೈನ್ ಕ್ರೀಡೆಯಲ್ಲಿ ನೀವು ದೊಡ್ಡ ಸಾಧನೆ ಮಾಡಬೇಕು, ದೈಹಿಕ ಶಿಕ್ಷಕರಿಗಾಗಿ ಕ್ರೀಡೆಯಲ್ಲ ವಿದ್ಯಾರ್ಥಿಗಳಿಗಾಗಿ ಕ್ರೀಡೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಮಾತನಾಡಿ ಮಕ್ಕಳೇ ದೇವರು, ದೇವರ ಸ್ವರೂಪರಾದ ನೀವುಗಳು ಇಂದು ಉತ್ತಮವಾಗಿ ನಿಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿ. ಈಗಿನ ವ್ಯವಸ್ಥೆಯನ್ನು ನಾವು ಪ್ರೀತಿಸಬೇಕು ಜೀವನದಲ್ಲಿ ಉತ್ತಮ ಗುರಿಗಳನ್ನು ಇಟ್ಟುಕೊಂಡು ನಿಮಗೆ ಸಿಗುವ ಸವಲತ್ತುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರ ಮೂಲಕ ರಾಜ್ಯ, ರಾಷ್ಟ್ರ ಮಟ್ಟದ ಸಾಧನೆಯಲ್ಲಿ ನೀವು ಗುರುತಿಸಿಕೊಳ್ಳಬೇಕು ಎಂದು ಹೇಳಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಈ ಸಮಾರಂಭದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮೂಡಬಿದರೆ ಪುರಸಭೆಯ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಶಶಿಧರ, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಶಿರೂರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಶ್ರೀಮತಿ ರಾಜಶ್ರೀ, ಶಿಕ್ಷಣ ಸಮನ್ವಯಾಧಿಕಾರಿಗಳಾದ ಶ್ರೀ ರಾಜೇಶ್ ಭಟ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ವಂದಿಸಿದರು, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ನಿತ್ಯಾನಂದ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಾಪ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು. ದೈಹಿಕ ಶಿಕ್ಷಕರಾದ ನವೀನ್ ಅಂಬೂರಿ ಕಾರ್ಯಕ್ರಮವನ್ನು ನಿರೂಪಿಸಿದರು.