Recent Posts

Sunday, January 19, 2025
ಸುದ್ದಿ

ಮೂಡಬಿದಿರೆ : AFMC ಗೆ ಆಯ್ಕೆಯಾದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ರಾಜೇಶ್ – ಕಹಳೆ ನ್ಯೂಸ್

ಮೂಡಬಿದಿರೆ: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ರಾಜೇಶ್ ಪರಶ್ರಾಮ್ ಮಾದವಲ್ಕರ್ ಕಳೆದ ಶೈಕ್ಷಣಿಕ ವರ್ಷದ ನಡೆದ ನೀಟ್ ಪರೀಕ್ಷೆಯಲ್ಲಿ 685 ಅಂಕ ಪಡೆಯುವ ಮೂಲಕ ಅತ್ಯುತ್ತಮ ಸಾಧನೆಯೊಂದಿಗೆ ಪುಣೆಯಲ್ಲಿರುವ ದೇಶದ ಪ್ರತಿಷ್ಟಿತ ಆರ್ಮ್ಡ್ ಫೋರ್ಸ್ ವೈದ್ಯಕೀಯ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ ಅರವತ್ತೊಂದನೇ (61) ಸ್ಥಾನದೊಂದಿಗೆ ಪ್ರವೇಶ ಪಡೆದಿರುತ್ತಾರೆ. ಈ ಮೂಲಕ ಅವರು ಸೈನ್ಯದಲ್ಲಿ ಲೆಫ್ಟಿನೆಂಟ್ ಶ್ರೇಣಿಗೆ ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ, ನೀಟ್ ಸಂಯೋಜಕರಾದ ಪ್ರಶಾಂತ್ ಹೆಗಡೆ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು