Sunday, November 24, 2024
ಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕನಕದಾಸ ಜಯಂತಿ ಆಚರಣೆ – ಕಹಳೆ ನ್ಯೂಸ್

ಪುತ್ತೂರು : “ದಾಸ ಸಾಹಿತ್ಯದ ಮೂಲಕ ಜೀವನಪಾಠ ಸಾರಿದವರು ಕನಕದಾಸರು. ಜಾತಿ ಮತ ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು.” ಎಂದು ನರೇಂದ್ರ ಪದವಿಪೂರ್ವ ಕಾಲೇಜಿನ ಕ್ರೀಡಾ ಶಿಕ್ಷಣ ಸಂಯೋಜಕರಾದ ಮಂಜು ಗಣೇಶ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ದಾಸ ಪರಂಪರೆಯ 50ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಸಹಜ ಬದುಕು ಬಾಳಿದ ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ ಸಂತರಾಗಿ ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ.” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನಭಾಗ್ ಮತ್ತು ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಮಧುರಾ ಸ್ವಾಗತಿಸಿ ವಂದಿಸಿದರು.