Sunday, January 19, 2025
ಜಿಲ್ಲೆಪುತ್ತೂರುಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್‌ ನೇಮಕಾತಿ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್‌. ಐ. ಐ. ಟಿ. ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ| ಗಣೇಶ್‌ ಭಟ್‌ ರವರು “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ ಬದಲು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸುವತ್ತ ಗಮನಹರಿಸಬೇಕಾದುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಅಗತ್ಯವಾಗಿದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳು ಪ್ರವೇಶ ಪರೀಕ್ಷೆಗಳಿಗೆ ಅರ್ಹತೆ ಮಡೆಯುವಲ್ಲಿ ಸಹಕಾರಿಯಾದರೆ ನಮ್ಮಲ್ಲಿರುವ ಕೌಶಲ್ವಗಳು ಉದ್ಯೋಗ ಪಡೆಯಲು ಸಕಾರಿಯಾಗುತ್ತವೆ” ಎಂದು ಹೇಳಿದರು. ಎನ್‌. ಐ. ಐ, ಟಿ. ಮಂಗಳೂರು ಶಾಖೆಯ ವಿದ್ಯಾರ್ಥಿ ಸಮಾಲೋಚಕರಾದ ಶ್ರೀಮತಿ ಶೀತಲ್‌ ರವರು ಬ್ಯಾಂಕಿಂಗ್‌ ಕ್ಷೇತ್ರದಲ್ಲಿನ ವಿಪುಲ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್‌. ಐ. ಐ, ಟಿ. ಮಂಗಳೂರು ಶಾಖೆಯ ಶೈಕ್ಷಣಿಕ ಸಲಹೆಗಾರರಾದ ಕು. ಶೀತಲ್‌ ರವರು ಉಪಸ್ಥಿತರಿದ್ದರು. ರಚಿತಾ ಮತ್ತು ಬಳಗ ಪ್ರಾರ್ಥಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕದ ಸಂಚಾಲಕರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಲೆ. ಜೋನ್ಸನ್‌ ಡೇವಿಡ್‌ ಸಿಕ್ವೇರಾ ವಂದಿಸಿದರು, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು