Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ದಂಬೆಕಾನ ಸದಾಶಿವ ರೈ ಅವರಿಗೆ ಒಲಿದ ಕರ್ನಾಟಕ ಸರಕಾರದ ಸಹಕಾರ ರತ್ನ ಪ್ರಶಸ್ತಿ : ನ.18 ರಂದು ಪ್ರಶಸ್ತಿ ಪ್ರಧಾನ –ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತವು, ರಾಜ್ಯಮಟ್ಟದ ರೋಯಲ್ ಸೌಹಾರ್ದ ಸಹಕಾರಿ ಪುತ್ತೂರು ಇದರ ಸ್ಥಾಪಕಾಧ್ಯಕ್ಷ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ದಂಬೆಕಾನ ಸದಾಶಿವ ರೈ ಅವರನ್ನು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದಂಬೆಕಾನ ಸದಾಶಿವ ರೈ ಇವರು ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ನ.18 ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ.

ದಂಬೆಕಾನ ಸದಾಶಿವ ರೈ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯೊಂದಿಗೆ ಭಾರತೀಯ ಜನತಾ ಪಾರ್ಟಿಯ ಸಂಘಟನೆಗೆ ಶ್ರಮಿಸಿದವರು. ಜಿಲ್ಲೆಯ ಹಿಂದೂ ಸಂಘಟನೆಗಳ ವಿವಿಧ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ಮುಖ್ಯವಾಗಿ ಸಹಕಾರ ಕ್ಷೇತ್ರದ ಮೂಲಕ ಸಮಾಜದ ಒಳಿತಾಗಿ ಶ್ರಮಿಸಿದ ಸಾಧನೆಗಾಗಿ ಅವರನ್ನು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹೀಗೆ ರಾಜಕೀಯ, ಧಾರ್ಮಿಕ, ಸಹಕಾರ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದಂಬೆಕಾನ ಸದಾಶಿವ ರೈ ಅವರು ಹಲವು ದಶಕಗಳಿಂದ ಸಮಾಜಮುಖಿ ಸೇವೆಯ ಮೂಲಕ ಗುರುತಿಸಿಕೊಂಡವರು. ಇದೀಗ ಇವರ ಅನನ್ಯ ಸೇವೆಯನ್ನ ಗುರುತಿಸಿ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.