ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕುಪ್ಪೆಪದವು ಘಟಕದ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ-ಕಹಳೆ ನ್ಯೂಸ್
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಇವರ ಕುಪ್ಪೆಪದವು ಘಟಕದ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕರಾದ ಡಾ. ಭರತ್ ಶೆಟ್ಟಿಯವರು ಉದ್ಘಾಟಿಸಿದರು. ನೇಲಚ್ಚಿಲ್ ಕುಪ್ಪೆಪದವು ನಾಗಂದಡಿ ಕ್ರೀಡಾಂಗಣದಲ್ಲಿ ಆದಿತ್ಯವಾರ ನಡೆದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು, ಕುಪ್ಪೆಪದವು ಘಟಕ ಅಧ್ಯಕ್ಷರಾದ ಜಗದೀಶ್ ದುರ್ಗಕೋಡಿ, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಸತೀಶ್ ಬಳ್ಳಾಜೆ, ಗಣ್ಯರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.