ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ(ನಿ.) ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ (ನಿ.)ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ತಾಲೂಕಿನ ಇತರ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಆಳದಂಗಡಿ ಇದರ ಆಶ್ರಯದಲ್ಲಿ “ಯುವಜನ, ಮಹಿಳಾಸಬಲ ವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ” ಎಂಬ ವಿಷಯದ ಕುರಿತು ಅಳದಂಗಡಿಯ ಶ್ರೀಗುರು ಸಭಾಭವನ ಸ್ವರಾಜ್ ಟವರ್ಸ್‍ನಲ್ಲಿ ನ.19ರಂದು 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 ನಡೆಯಲಿದೆ.
ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ(ನಿ.)ದ ಅಧ್ಯಕ್ಷರಾದ ಶಿವ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಹಕಾರ ರತ್ನ ಡಾ.ಎಂ .ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ.
ಇನ್ನು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹರೀಶ್ ಪೂಂಜ, ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಮಂಗಳೂರು ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಮಂಗಳೂರು ದ.ಕ.ಜಿ.ಸ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ಮಂಗಳೂರು ದ.ಕ.ಜಿ.ಕೇ.ಸಹಕಾರಿ ಬ್ಯಾಂಕ್(ನಿ.)ದ ನಿರ್ದೇಶಕರಾದ ಬಿ. ನಿರಂಜನ್, ಮಂಗಳೂರು ದ.ಕ.ಜಿ.ಸ.ಹಾ.ಉ, ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ಮಂಗಳೂರು ದ.ಕ.ಜಿ.ಸಹಕಾರಿ ಯೂನಿಯನ್ ನ ಉಪಾಧ್ಯಕ್ಷರಾದ ಇ. ಸುಂದರ ಗೌಡ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಸೌಮ್ಯ ಹರಿಪ್ರಸಾದ್, ಮಂಗಳೂರು ದ.ಕ.ಸ.ಯೂನಿಯನ್ ನ ನಿರ್ದೆಶಕರಾದ ಶ್ರೀಮತಿ ಸಾವಿತ್ರಿ ರೈ, ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಿ.) ನ ಅಧ್ಯಕ್ಷರಾದ ಸೋಮನಾಥ ಬಂಗೇರ, ದ.ಕ.ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀನಾರಾಯಣ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್, ಹಾಗೂ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಬಿ.ವಿ. ಪ್ರತಿಮಾ ಮತ್ತಿತ್ತರರು ಭಾಗವಹಿಸಲಿದ್ದಾರೆ.