ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಮಹಿಳಾ ಸಬಲೀಕರಣ ಘಟಕಗಳ ಜಂಟಿ ಆಶ್ರಯದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟುವ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು.
‘ಸುಶೆಗ್ʼ ಆತ್ಮಹತ್ಯಾ ಹೆಲ್ಪ್ ಲೈನ್ ನ ಸದಸ್ಯರಾದ ಶ್ರೀಮತಿ ಸ್ಯಾಂಡ್ರಾ ಸುವಾರಿಸ್ ಮತ್ತು ವಿದ್ಯಾರ್ಥಿ ಸಲಹೆಗಾರರಾದ ಶ್ರೀಮತಿ ಜ್ಯೋತಿ ಕಾನಡೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಅವರು ಆತ್ಮಹತ್ಯೆಯ ಮುಖ್ಯ ಕಾರಣಗಳು ಹಾಗೂ ಅವುಗಳನ್ನು ತಡೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಧ್ಯಕ್ಷ ಸ್ಥಾನ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ| ಗಣೇಶ್ ಭಟ್ ರವರು “ಪ್ರಸಕ್ತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಬಹಳ ಬೇಗ ಮಾನಸಿಕ ಉದ್ವೇಗಕ್ಕೊಳಗಾಗುತ್ತಾರೆ. ಸಣ್ಣ ಪುಟ್ಟ ವಿಷಯಗಳಿಗೆ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ ಆದ್ದರಿಂದ ಇಂತಹ ಜಾಗೃತಿ ಕಾರ್ಯಕ್ರಮಗಳು ಅವಶ್ಯ” ಎಂದು ಹೇಳಿದರು.
ಪ್ರೀತಮ್ ಮತ್ತು ಬಳಗ ಪ್ರಾರ್ಥಿಸಿ, ಡಾ. ಡಿಂಪಲ್ ಫೆರ್ನಾಂಡಿಸ್ ಸ್ವಾಗತಿಸಿದರು. ಶ್ರೀಮತಿ ನ್ಯಾನ್ಸಿ ಲವೀನಾ ಪಿಂಟೋ ವಂದಿಸಿ,ಮೆಲನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.