Friday, January 24, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಂದೂ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣ ; ಸತೀಶ್ ಜಾರಕಿಹೊಳಿಗೆ ಸ್ವ-ಕ್ಷೇತ್ರ ಯಮಕನಮರಡಿಯಲ್ಲಿ ಬಹಿರಂಗ ಸವಾಲೆಸೆದು ತೊಡೆ ತಟ್ಟಿದ ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಚಿಕ್ಕೋಡಿ: ಹಿಂದೂ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಳಗಾವಿಯ ಯಮಕನಮರಡಿಯಲ್ಲಿ ನಡೆಯುತ್ತಿರುವ ‘ನಾನು ಹಿಂದೂ’ ಕಾರ್ಯಕ್ರಮದಲ್ಲಿ ಅವರು ಈ ಸವಾಲೆಸೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಸ್ವ-ಕ್ಷೇತ್ರವಾದ ಯಮಕನಮರಡಿಯಲ್ಲಿ ನಾನು ಹಿಂದೂ ಸಮಾವೇಶ ನಡೆಯುತ್ತಿದ್ದು, ಅಭಿನವ ಮಂಜುನಾಥ ಮಹಾಸ್ವಾಮಿ ಹಾಗೂ ಹಾಲಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದಾರೆ. ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್ ಪಾಟೀಲ್, ಮಾಜಿ ಸಚಿವ ಶಶಿಕಾಂತ ನಾಯಿಕ, ಮಾರುತಿ ಅಷ್ಟಗಿ, ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಾರಕಿಹೊಳಿಗೆ ಸೂಲಿಬೆಲೆ ಸವಾಲು ಹಾಕಿದ್ದಾರೆ.

ನಿಪ್ಪಾಣಿಯಲ್ಲಿ ಸತೀಶ್ ಜಾರಕಿಹೊಳಿ ಹಿಂದೂ ಪದವೇ ಹೊಲಸು ಎಂದು ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಯಮಕನಮರಡಿಯಲ್ಲಿ ನಾನು ಹಿಂದೂ ಕಾರ್ಯಕ್ರಮ ಆಯೋಜಿಸಲಾಗಿದೆ. ನನ್ನ ತಾಯಿ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ನಾನು ಸುಮ್ಮನೆ ಬಿಡುವುದಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡುವುದಕ್ಕೆ ನಾನು ಬಹಿರಂಗ ಚರ್ಚೆಗೆ ಸವಾಲು ಹಾಕುತ್ತೇನೆ ಬನ್ನಿ ಎಂದು ಜಾರಕಿಹೊಳಿ ವಿರುದ್ಧ ಸೂಲಿಬೆಲೆ ತೊಡೆ ತಟ್ಟಿದ್ದಾರೆ.