Saturday, January 25, 2025
ಸುದ್ದಿ

ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂತರ್ ರಾಜ್ಯ ಕಳ್ಳರು ಪೊಲೀಸರ ಬಲೆಗೆ –ಕಹಳೆ ನ್ಯೂಸ್

ಉಡುಪಿ : ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ ಗೆ ತೆರಳಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್ ಆಲಿ (32), ಅಶುರ್ ಆಲಿ (32) ಮತ್ತು ಗಣೇಶ್ ಕುಮಾರ್ ಬಂಧಿತರು. ಬಂಧಿತರಿAದ ರೂ. 1,49,000 ಮೌಲ್ಯದ 28.882 ಗ್ರಾಂ ತೂಕದ ಚಿನ್ನದ ಗಟ್ಟಿ, ರೂ.1,17,000 ಮೌಲ್ಯದ 26 ಗ್ರಾಂ ಚಿನ್ನದ ಗಟ್ಟಿ ಮತ್ತು ಒಂದು ಮೋಟಾರ್ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಲಿಯಾಳಂ ಮತ್ತು ತಮಿಳಿನಲ್ಲಿ ಮಾತನಾಡುತ್ತಿದ್ದ ಅಪರಿಚಿತರಿಬ್ಬರು ಗ್ರಾಹಕರ ಸೋಗಿನಲ್ಲಿ ಶಿರ್ವ ಪೇಟೆಯಲ್ಲಿನ ಆಭರಣದಂಗಡಿಗೆ ಬಂದು ಜೂನ್ 6 ರಂದು 1.49 ಲ.ರೂ ಮೌಲ್ಯದ 28.79 ಗ್ರಾಂ. ಚಿನ್ನದ ನೆಕ್ಲೆಸ್ ಕಳವು ಮಾಡಿದ್ದರು. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು