Saturday, January 25, 2025
ಸುದ್ದಿ

ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯು ನ.16ರಂದು ನಡೆಯಿತು. ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಕಲಾ ವಿಭಾಗದ ಮಂಜುನಾಥ್ ಜೋಡುಕಲ್ಲು, ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ರಕ್ಷಿತ್ ಹಾಗೂ ಜತೆ ಕಾರ್ಯದರ್ಶಿಯಾಗಿ ತೃತೀಯ ಬಿಸಿಎ ವಿದ್ಯಾರ್ಥಿನಿ ವಿಖ್ಯಾ ಆಯ್ಕೆಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಸಹಕರಿಸಿದರು.