Tuesday, January 21, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಮಾರತ್ತಹಳ್ಳಿಯ ಕಾಲೇಜಿನ ಕಲ್ಚರಲ್ ಕಾರ್ಯಕ್ರಮದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ​ ಘೋಷಣೆ ಕೂಗಿದ ಯುವಕ – ಯುವತಿ ; ಪ್ರಕರಣ ದಾಖಲು – ಕಹಳೆ ನ್ಯೂಸ್


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು: ಇದನ್ನು ಯುವಕರ ಹುಚ್ಚಾಟ ಎಂದು ಕರೆಯಬೇಕೋ ಗೊತ್ತಿಲ್ಲ. ಆದರೆ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ!

ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಯುವಕ-ಯುವತಿಯರ ಕೂಗಾಟದ ಎಕ್ಸ್​ಕ್ಲೂಸಿವ್ ವಿಡಿಯೋ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘೋಷಣೆ ಕೂಗಿರುವ ಇಬ್ಬರನ್ನೂ ಮಾರತ್ತಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

ಕಾಲೇಜಿನಲ್ಲಿ ಕಲ್ಚರಲ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಮಾಷೆಗಾಗಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ವಿದ್ಯಾರ್ಥಿಗಳು ಕೂಗಿದ್ದಾರೆ. ವಿದ್ಯಾರ್ಥಿಗಳನ್ನು ರಿಯಾ , ಆರ್ಯನ್,ದಿನಕರ್ ಎಂದು ಗುರುತಿಸಲಾಗಿದ್ದು ಸದ್ಯ ಈ ಕೇಸನ್ನ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ. ಸದ್ಯ ಮೂವರನ್ನೂ ಮಾರತ್ತಹಳ್ಳಿ ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸುತ್ತಿದ್ದಾರೆ.