Wednesday, January 22, 2025
ಸುದ್ದಿ

ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯದಲ್ಲಿ ಶೌರ್ಯವಿಪತ್ತು ನಿರ್ವಹಣಾ ಘಟಕದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಪೆರ್ನೆ ವಲಯ ಜನಜಾಗೃತಿ ವೇದಿಕೆ, ರೋಟರಿ ಕ್ಲಬ್ ಬಂಟ್ವಾಳ ಹಾಗೂ ಶೌರ್ಯವಿಪತ್ತು ನಿರ್ವಹಣಾ ಘಟಕದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ಗಿಡ ನಾಟಿ ಕಾರ್ಯಕ್ರಮ ಪೆರ್ನೆ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಯೋಜನೆಯ ವಲಯ ಅಧ್ಯರಾದ ರಾಬರ್ಟ್ ಫರ್ನಾಂಡಿಸ್, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವಾ ಕೊಡಾಜೆ, ರೋಟರಿ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಪ್ರಾಂಶುಪಾಲ ರಾದ ಶೇಖರ್ ರೈ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ್, ಪ್ರೌಢಶಾಲಾ ಮುಖ್ಯ ಶಿಕ್ಷಕ ತಾರನಾಥ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ಇಂದಿರಾ ಸ್ವಾಗತಿಸಿ, ಉಪನ್ಯಾಸಕರಾದ ಗಣೇಶ್ ಧನ್ಯವಾದ ನೀಡಿದರು ಪೆರ್ನೆ ವಲಯ ಮೇಲ್ವಿ ಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ 100 ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು