Friday, January 24, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಲಾಯಿಲದಲ್ಲಿ ಟ್ರಕ್‌ ಹಾಗೂ ಗೂಡ್ಸ್‌‌ ವಾಹನದ ನಡುವೆ ಅಪಘಾತ ; ಮೂವರಿಗೆಗಾಯ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ನ 21 : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್‌ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್‌ಗಳನ್ನು ತುಂಬಿದ್ದು, ಖಾಸಗಿ ಕಂಪನಿಗೆ ಸೇರಿದ ಸರಕು ಸಾಗಣೆ ವಾಹನ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿತ್ತು. ಅಪಘಾತದಲ್ಲಿ ಸರಕು ಸಾಗಣೆ ವಾಹನಕ್ಕೆ ತೀವ್ರ ಹಾನಿಯಾಗಿದೆ.ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿದರು.