Friday, September 20, 2024
ಸುದ್ದಿ

ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು ತಾಲ್ಲೂಕಿನ ಶಿಕ್ಷಣ ಕ್ಷೇತ್ರದಲ್ಲಿ 94 ವರುಷಗಳ ಇತಿಹಾಸ ಹೊಂದಿರುವ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವು ದಿನಾಂಕ 12/11/2022 ನೇ ಶನಿವಾರ ಸಂಜೆ 5 ಗಂಟೆಗೆ ಬೆಥನಿ ಶಿಕ್ಷಣ ಮಂಡಳಿಯ ಕಾರ್ಪೊರೇಟ್ ಮ್ಯಾನೇಜರ್ ವಂದನೀಯ ಭಗಿನಿ ಸಿಸಿಲಿಯ ಮೆಂಡೋನ್ಸರವರು ಅಧ್ಯಕ್ಷತೆಯನ್ನು ವಹಿಸಿ, ದೀಪ ಬೆಳಗಿಸಿ ಮಾತನಾಡಿ ಹಿರಿಯ ವಿಧಾರ್ಥಿಗಳನ್ನು ಮತ್ತೆ ನಮ್ಮ ಸಂಸ್ಥೆ ಜೊತೆ ಜೋಡಿಸಿ, ಶಾಲೆಯ ಅಭಿವೃದ್ಧಿಯಲ್ಲಿ ತೊಡಗಿಸಿ ಕನ್ನಡ ಮಾಧ್ಯಮ ಶಾಲೆಯನ್ನು ಶೈಕ್ಷಣಿಕ ಗುಣಮಟ್ಟದ ದೃಷ್ಟಿಯೊಂದಿಗೆ ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಸಾಗಲು ಈ ಕಾರ್ಯಕ್ರಮ ಮುನ್ನುಡಿಯಾಗಲಿ ಎಂದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ರಘುನಾಥ ರೈ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಶ್ರೀ ರಾಮಚಂದ್ರ ಭಟ್, ಹಿರಿಯ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ದೋರತಿ ಮೇರಿ ಡಿಸೋಜಾ, ಶ್ರೀಮತಿ ರೋಜ್ಲಿನ್ ಡಿಸಿಲ್ವ, ಶ್ರೀಮತಿ ಐರಿಸ್ ರೆಬೆಲ್ಲೋ, ಶ್ರೀಮತಿ ಸಬೀನಾ ಲಸ್ರಾದೋ, ಶ್ರೀಮತಿ ಪ್ರೆಸ್ಸಿ ಲೋಬೋ, ರಕ್ಷಕ ಶಿಕ್ಷಕ ಸಂಫದ ಸದಸ್ಯರಾದ ಶ್ರೀಯುತ ಸತೀಶ್ ಆರ್, ಶ್ರೀಮತಿ ಪ್ರಿಯ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳ ಪರವಾಗಿ ಬಜಾಜ್ ಫೈನಾನ್ಸ್ ಪ್ರಾದೇಶಿಕ ವಿಭಾಗದ ಮಂಗಳೂರು ಪ್ರಬಂಧಕರಾದ ಶ್ರೀ ಪ್ರದೀಪ್ ಮಾತನಾಡಿ ಕಾರ್ಯಕ್ರಮದ ಆಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 100 ಕ್ಕಿಂತ ಅಧಿಕ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗಾವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಶಾಲಾ ಶಿಕ್ಷಕವೃಂದ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಸ್ವಾಗತಿಸಿ,ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ರಘುನಾಥ ರೈ ಪ್ರಸ್ತಾಪಿಸಿ,ಹಿರಿಯ ಶಿಕ್ಷಕಿ ಶ್ರೀಮತಿ ವಿಲ್ಮಾ ಫೆರ್ನಾಂಡೀಸ್ ವಂದಿಸಿ, ಶಿಕ್ಷಕರಾದ ಶ್ರೀ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು