Recent Posts

Monday, April 14, 2025
ಸುದ್ದಿ

ಶಾಲಾ ಕಾಲೇಜುಗಳಲ್ಲಿ ಕಳವು ಪ್ರಕರಣ-ಇಬ್ಬರ ಬಂಧನ, ಬೈಕು & 2 ಮೊಬೈಲ್ ಹಾಗೂ 10 ಸಾವಿರ ನಗದು ವಶ – ಕಹಳೆ ನ್ಯೂಸ್

ಉಡುಪಿ : ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿಯ ಕುಂದಾಪುರ ಕೋಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ (29) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್‌ಎಸ್ ರಸ್ತೆಯ ಜಾಹೀದ ಸಿನಾನ್ (32) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಒಂದು ಬೈಕು, ಎರಡು ಮೊಬೈಲ್ ಹಾಗೂ 10,000ರೂ. ನಗದು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ.

ನವೆಂಬರ್ 21ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಗ್ರಾಮದ ಬಳಿ ಬೈಕ್‌ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇವರು 4 ಜಿಲ್ಲೆಗಳ 37 ಕಡೆ ಕಳ್ಳತನ ನಡೆಸಿದ್ದು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ವ್ಯಾಪ್ತಿಯ ಒಟ್ಟು 27 ಕಡೆ ಶಾಲಾ ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ರಿಪ್ಪನಪೇಟೆ, ನಗರ ಠಾಣೆಗಳಲ್ಲಿ 6 ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಮುಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿ ಎಲ್ಲ ಪ್ರಕರಣಗಳನ್ನು ಭೇದಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ