Tuesday, January 21, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಿಸುತ್ತಿದ್ದ ಸಹ ವಿದ್ಯಾರ್ಥಿ ಅರೆಸ್ಟ್​: ಮೊಬೈಲ್​ನಲ್ಲಿತ್ತು 1200ಕ್ಕೂ ಹೆಚ್ಚು ವಿಡಿಯೋ – ಕಹಳೆ ನ್ಯೂಸ್ 

ಬೆಂಗಳೂರು: ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಗಿರಿನಗರ ಠಾಣಾ ಪೊಲೀಸರು ಸೋಮವಾರ (ನ.21) ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶುಭಂ ಎಂ ಆಜಾದ್ ಬಂಧಿತ ಆರೋಪಿ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ಬಿಬಿಎ ಎಲ್​ಎಲ್​ಬಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ.

ಕಾಲೇಜಿನ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. 1200ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳನ್ನು ಆರೋಪಿ ಚಿತ್ರೀಕರಿಸಿರುವುದಾಗಿ ತಿಳಿದುಬಂದಿದೆ.

ಸ್ನೇಹಿತೆಯರು ಜೊತೆಯಲ್ಲಿದ್ದಾಗಲು ಅವರ ಅರೆನಗ್ನ ಪೋಟೋ ತೆಗೆದಿದ್ದ. ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ, ಕ್ಯಾಮೆರಾ ನೋಡಿ ಯುವತಿಯರು ಚೀರಾಡಿದ್ದಾರೆ ಈ ವೇಳೆ ಆರೋಪಿ ಪರಾರಿಯಾಗಿದ್ದ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಶುಭಂ ಕೃತ್ಯ ಬೆಳಕಿಗೆ ಬಂದಿದೆ.

ಈ ಹಿಂದೆಯು ಆರೋಪಿ ಶುಭಂ ಇದೇ ರೀತಿ ಮಾಡಿ ಕ್ಷಮಾಪಣಾ ಪತ್ರ ಬರೆದುಕೊಟ್ಟಿದ್ದ. ಇಷ್ಟಾದರೂ ಮತ್ತೆ ತನ್ನ ಚಾಳಿ ಮುಂದುವರೆಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನ ಮೊಬೈಲ್​​ನಲ್ಲಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಪೋಟೋಗಳು ಪತ್ತೆಯಾಗಿವೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವಿಡಿಯೋಗಳು ಪತ್ತೆಯಾಗುವ ಸಾಧ್ಯತೆ ಇದೆ.

ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.