Monday, January 20, 2025
ಸುದ್ದಿ

ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು –ಕಹಳೆ ನ್ಯೂಸ್

ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಮೃತ ಯುವತಿ. ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬAಧಿಕರ ಮನೆಗೆ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದು, ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಜೋಸ್ನಾ ಕುಸಿದುಬಿದ್ದಿದ್ದರು. ತಕ್ಷಣ ಸಂಬAಧಿಕರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಜೋಸ್ನಾ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು