Thursday, January 23, 2025
ಸುದ್ದಿ

ಶಿರಸಿಯಲ್ಲಿ ಸುಮಾರು 40 ಲಕ್ಷದಲ್ಲಿ ನಿರ್ಮಾಣಗೊಂಡಿರುವ ಮೀನು ಮಾರುಕಟ್ಟೆ ಇಂದು ಲೋಕಾರ್ಪಣೆ-ಕಹಳೆ ನ್ಯೂಸ್

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಕರ್ನಾಟಕ ಸರಕಾರ ಇದರ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವ್ಯಾಪ್ತಿಯ ನಿಲೇಕಣಿಯಲ್ಲಿ ಸುಮಾರು 40 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಮೀನು ಮಾರುಕಟ್ಟೆಯನ್ನು ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ತಿಮ್ಮಪ್ಪ ಶೆಟ್ಟಿ ಚನಿಲ, sಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವರಾದ ಅರೆಬೈಲ್ ಶಿವರಾಮ ಹೆಬ್ಬಾರ, ಉತ್ತರ ಕನ್ನಡ ಲೋಕಸಭಾಕ್ಷೇತ್ರದ ಸಂಸದರಾದ ಆನಂತಕುಮಾರ ಹೆಗಡೆ, ಹಾಗೂ ಮತ್ತಿತರ ಶಾಸಕರು, ಸಚಿವರುಗಳು ಉಪಸ್ಥಿತರಿದ್ದರು.