Wednesday, January 22, 2025
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ– ಕಹಳೆ ನ್ಯೂಸ್

ಪುತ್ತೂರು : ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ರವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನು ಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನು ರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನು ತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನು ಗೌರವಿಸೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.