Wednesday, January 22, 2025
ಸುದ್ದಿ

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ-ಕಹಳೆ ನ್ಯೂಸ್

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸರಕಾರದಿಂದ 2 ಕೋಟಿ ರೂ.ನೆರವು ದೊರಕಿದ್ದು ಅಂದಾಜು 12 ಕೋಟಿ ರೂ.ಗಳ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಬ್ರಹ್ಮಕಲಶಾಧಿ ಧಾರ್ಮಿಕ ಸೇವಾ ಕಾರ್ಯಗಳು ಮಾ.5 ರಿಂದ 13 ರವರೆಗೆ ಜರಗಲಿದ್ದು ,13 ರಂದು ಬ್ರಹ್ಮಕಲಶ ಮತ್ತು 14 ರಿಂದ ಜಾತ್ರಾ ಮಹೋತ್ಸವ ಜರಗಲಿದೆ.

ಇದಕ್ಕೆ ಪೂರ್ವಭಾವಿಯಾಗಿ ನ.28ರಂದು ಧ್ವಜ ಪ್ರತಿಷ್ಪಾಪನಾ ಕಾರ್ಯ ನಡೆಯಲಿದೆ. ಎಲ್ಲಾ ದೇವತಾಕಾರ್ಯಕ್ರಮಗಳಿಗೆ ಊರಿನ ಗ್ರಾಮಸ್ಥರು ಸ್ವಯಂ ಸೇವಕರಾಗಿ ಆಗಮಿಸಿ ದೇವರ ಕೆಲಸ ಕಾರ್ಯಗಳಲ್ಲಿ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಚಿತ್ರಾಪುರ ಮಠದ ಶ್ರೀ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು, ಜೀರ್ಣೋದ್ದಾರ ಸಮಿತಿ ಸಂಚಾಲಕರಾದ ಉಮೇಶ್ ಟಿ.ಕರ್ಕೇರ, ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್ ಬೈಕಂಪಾಡಿ, ಮನಪಾ ಸದಸ್ಯೆ ಸುಮಿತ್ರ ಕರಿಯ, ಪ್ರಧಾನ ಕಾರ್ಯದರ್ಶಿ ಗಣೇಶ ಹೊಸಬೆಟ್ಟು, ಲೆಕ್ಕಾಧಿಕಾರಿ ಎಚ್.ಎಲ್ ರಾವ್, ಉಪತಹಶೀಲ್ದಾರ್ ನವೀನ್ ಕುಮಾರ್ ಹಾಗೂ ಪದಾಧಿಕಾರಿಗಳು, ಊರಿನ ಗ್ರಾಮಸ್ಥರು, ವಿವಿಧ ಮೊಗವೀರ ಮಹಾಸಭಾದ ಪ್ರತಿನಿಧಿಗಳು ಉಪಸ್ಥಿತರಿದ್ದರು.