Recent Posts

Tuesday, January 21, 2025
ಉಡುಪಿಸುದ್ದಿ

ಉಡುಪಿ ಕೃಷ್ಣ ಮಠದ ಪರಿಸರಕ್ಕೂ ಬಂದಿದ್ದನಂತೆ ಉಗ್ರ ಶಾರೀಕ್..! –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ : ಕೃಷ್ಣ ಮಠದ ರಥಬೀದಿ ಪರಿಸರಕ್ಕೆ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಉಗ್ರ ಶಾರೀಕ್ ಅಕ್ಟೋಬರ್‌ನಲ್ಲಿ ಬಂದಿದ್ದ ಬಗ್ಗೆ ಮಂಗಳೂರಿನ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಶನಿವಾರ ವಿವಿಧೆಡೆ ಪರಿಶೀಲನೆ ನಡೆಸಿದ್ದಾರೆ.

ಶಾರೀಕ್‌ನ ಮೊಬೈಲ್ ಪರಿಶೀಲನೆ ಸಂದರ್ಭ ರಥಬೀದಿ ಯಿಂದ ಕರೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಪೊಲೀಸರು ರಥಬೀದಿಗೆ ಆಗಮಿಸಿ, ಕೃಷ್ಣ ಮಠ ಆತನ ಗುರಿ ಆಗಿತ್ತೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ರಥಬೀದಿ ಸುತ್ತಲಿನ ಅಂಗಡಿಗಳಲ್ಲಿರುವ ಸಿಸಿ ಕೆಮರಾ ಫೂಟೇಜ್‌ಗಳನ್ನು ಸಂಗ್ರಹಿಸಿದ್ದಾರೆ.

ಸಹಾಯ ಪಡೆದಿದ್ದ ಮಹಿಳೆ
ಶಾರೀಕ್ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದ ವೇಳೆ ರಥಬೀದಿ ಪರಿಸರದಲ್ಲಿರುವ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಆತನ ಮೊಬೈಲ್ ಪಡೆದು ಯಾರಿಗೋ ಕರೆ ಮಾಡಿರುವುದು ತಿಳಿದು ಬಂದಿದೆ. ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆಕೆಯು ತನ್ನ ಮೊಮ್ಮಗನಿಗೆ ಕರೆ ಮಾಡಿರುವುದಾಗಿ ತಿಳಿಸಿದ್ದಾಳೆ. ಮೊಮ್ಮಗನನ್ನು ಅತಿಯಾಗಿ ಪ್ರೀತಿಸುವ ಆಕೆ ಯಾರೇ ಸಿಕ್ಕರೂ ಅವರಿಂದ ಮೊಬೈಲ್ ಪಡೆದು ಆತನಿಗೆ ಕರೆ ಮಾಡುವುದು ರೂಢಿ. ಎಂದಿನಂತೆ ಆಕೆ ಶಾರೀಕ್‌ನ ಮೊಬೈಲ್‌ನಿಂದಲೂ ಕರೆ ಮಾಡಿರಬೇಕು ಎಂದು ತಿಳಿದುಬಂದಿದೆ.
ಮಠದಿಂದ ಕಾರ್ಕಳಕ್ಕೆ
ಶ್ರೀಕೃಷ್ಣ ಮಠದಿಂದ ಆತ ಮಣಿಪಾಲ ಮಾರ್ಗವಾಗಿ ಕಾರ್ಕಳಕ್ಕೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.