ಪಾಂಡವರಕಲ್ಲು ಸಮೀಪದ ಅಕ್ರಮ ಕಸಾಯಿಖಾನೆಗೆ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್ ನೇತೃತ್ವದಲ್ಲಿ ದಾಳಿ ; ಗೋ ಮಾಂಸ ಸಹಿತ ಆರೋಪಿ ಇಸ್ಮಾಯಿಲ್ ಬಂಧನ – ಕಹಳೆ ನ್ಯೂಸ್
ಪುಂಜಾಲಕಟ್ಟೆ: ಅಕ್ರಮ ಕಸಾಯಿಖಾನೆಯಲ್ಲಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ದಂಧೆಯ ಅಡ್ಡೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾ.ಪಂ. ವ್ಯಾಪ್ತಿಯ ಪಾಂಡವರಕಲ್ಲು ಸಮೀಪದ ಕುದ್ರು ಎಂಬಲ್ಲಿ ಸೋಮವಾರ ಸಂಭವಿಸಿದೆ.
ಇಲ್ಲಿನ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿಯಾಗಿದ್ದು, ಸ್ಥಳದಲ್ಲಿದ್ದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಬೈಕ್ ಹಾಗೂ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಇಸ್ಮಾಯಿಲ್ ಅವರ ಮನೆಯ ಹಿಂಬದಿಯಲ್ಲಿರುವ ಅಕ್ರಮ ಕಟ್ಟಡದಲ್ಲಿ ಪರವಾನಗಿ ರಹಿತವಾಗಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಮೇಲೆ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.