Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ತನಿಖೆ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರ – ಕಹಳೆ ನ್ಯೂಸ್

ಮಂಗಳೂರು, ಡಿ 01 : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ನ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಇಂದಿನಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರೀಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ ಸಲುವಾಗಿ ಎನ್‌ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿವೆ.ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ಚೇತರಿಸಿಕೊಳ್ಳುತ್ತಿದ್ದು, ಬುಧವಾರವೂ ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು.