Sunday, September 8, 2024
ಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಣೆ –ಕಹಳೆ ನ್ಯೂಸ್

ಪುತ್ತೂರು ನವಂಬರ್ 26: ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಅಪರಾಹ್ನ 2 ಗಂಟೆಗೆ ಸರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೊರವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಥೂಲ ಪರಿಚಯ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಶ್ರೀಮತಿ ಅನಿಶಾ ರವರು ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಎನ್ ಸಿ ಸಿ ಸೇನಾಧಿಕಾರಿ ಹವಾಲ್ದಾರ್ ಶುಭಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾನವಿಕ ವಿಭಾಗದ ಮುಖ್ಯಸ್ಥರಾದ ಪ್ರೊ| ಸುಬೈರ್ ಸ್ವಾಗತಿಸಿದರೆ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ| ವಾಸುದೇವ ವಂದಿಸಿದರು. ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಪ್ರಿಯಾ ಡಿ ಸೋಜರವರು ಸಂವಿಧಾನದ ಪೂರ್ವ ಪೀಠಿಕೆಯನ್ನು ನೆರೆದವರಿಗೆ ಬೋಧಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.