Friday, September 20, 2024
ಸುದ್ದಿ

Breaking News : ಮಸಾಜ್ ಪಾರ್ಲರ್ ಗೆ ದಾಳಿ ; ಮಹಿಳಾ ಪಿಂಪ್ ಸೆರೆ, 5 ನೊಂದ ಯುವತಿಯರ ರಕ್ಷಿಣೆ – ಕಹಳೆ ನ್ಯೂಸ್

ಮಂಗಳೂರು, ಜು 30 : ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ ರಾಮಾನುಗ್ರಹ ಕಟ್ಟಡದಲ್ಲಿರುವ ಎಮ್ /ಎಸ್ ಲೋಟಸ್ ಸಲೂನ್ ಎಂಡ್ ವೆಲ್ ನೆಸ್ಎಂ ಬ ಹೆಸರಿನ ಮಸಾಜ್ ಸೆಂಟರ್ ಗೆ ಸಿಸಿಬಿ ಪೊಲೀಸರು ಹಾಗೂ ಕಾವೂರು ಠಾಣಾ ಪೊಲೀಸರು, ದಾಳಿ ನಡೆಸಿ ಮಹಿಳಾ ಪಿಂಪ್ ಓರ್ವಳನ್ನು ವಶಕ್ಕೆ ಪಡೆದಿದ್ದಾರೆ. ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಸಾಜ್ ಹೆಸರಿನಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದು, ಮಸಾಜ್ ಸೆಂಟರ್ ನಲ್ಲಿದ್ದ 5 ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಮಸಾಜ್ ಸೆಂಟರ್ ನ್ನು ನಡೆಸುತ್ತಿದ್ದ ರಾಜೇಶ್, ಸತೀಶ್ ಮತ್ತು ಜಯರಾಜ್ ತಲೆಮರೆಸಿಕೊಂಡಿದ್ದು ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಜಾಹೀರಾತು

ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತರಾಮ, ಕಾವೂರು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ. ಆರ್ ನಾಯ್ಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.