ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ಡಿ. 6 ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ – ಕಹಳೆ ನ್ಯೂಸ್
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ ಮೂರು ದಿನ ದತ್ತಾತ್ರೇಯ ಜಯಂತಿಯ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ವ್ಯವಸ್ಥಾಪನ ಸಮಿತಿ ನೇಮಿಸಿದ್ದ ಸರ್ಕಾರದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗಿಯ ಪೀಠ ವಿಚಾರಣೆ ನಡೆಸಿದೆ.
ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ಡಿಸೆಂಬರ್ 6, 7, 8 ರಂದು ದತ್ತಾತ್ರೇಯ ಜಯಂತಿ ನಡೆಸಲು ಉದ್ದೇಶಿಸಲಾಗಿದೆ. ಪೂಜಾ ವಿಧಿ ವಿಧಾನ ಉಸ್ತುವಾರಿ ವಹಿಸಲು ರಚಿಸಿದ ವ್ಯವಸ್ಥಾಪನಾ ಸಮಿತಿ ದತ್ತ ಜಯಂತಿ ಆಚರಣೆಗೆ ಸಿದ್ಧತೆ ನಡೆಸಿದೆ. ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಪ್ರದಾಯದಂತೆ ದತ್ತಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಅರ್ಚಕ ಮತ್ತು ಮುಜಾವರ್ ಅವರನ್ನು ನೇಮಿಸಲಾಗಿದೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿದೆ. ಡಿಸೆಂಬರ್ 6 ರಿಂದ 8 ರವರೆಗೆ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಿದೆ.