Sunday, January 19, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣ ; ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ..! – ಕಹಳೆ ನ್ಯೂಸ್

ಮಂಗಳೂರು, ಡಿ 01 : ಆಟೋದಲ್ಲಿ ಕುಕ್ಕರ್‌ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾರೀಕ್‌ ಡಾರ್ಕ್‌ವೆಬ್‌ ಮೂಲಕ ಖಾತೆ ತೆರೆದಿದ್ದು, ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗಿದೆ.

ಇನ್ನು ಮೈಸೂರಿನಲ್ಲಿ ಅನೇಕ ಮಂದಿಯ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು, ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಎನ್‌ಐಎಯ ಮೂರು ತಂಡಗಳು ಮಂಗಳೂರಿಗೆ ಆಗಮಿಸಿದೆ ಎಂದು ತಿಳಿದು ಬಂದಿದೆ.