Tuesday, January 21, 2025
ಸುದ್ದಿ

ಡಿ.4ರಂದು 1992ರ ಗೀತಾ ಜಯಂತಿಯ ಸವಿನೆನಪಿಗಾಗಿ ಪರಾಕ್ರಮ್ ದಿವಸ್ ಕಾರ್ಯಕ್ರಮ– ಕಹಳೆ ನ್ಯೂಸ್

ಬಿಜೆಪಿ ಯುವ ಮೂರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಅಯೋಧ್ಯಾ ಶ್ರೀರಾಮ ಜನ್ಮ ಭೂಮಿ ಮುಕ್ತಿ ಆಂದೋಲನದಲ್ಲಿ ನಿರ್ಣಾಯಕ ಕಾಲಘಟ್ಟವೆನಿಸಿದ 1992ರ ಗೀತಾ ಜಯಂತಿಯ ಸವಿನೆನಪಿಗಾಗಿ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಡಿ.4ರಂದು ಉಪ್ಪಿನಂಗಡಿಯ ಸಂಗಮ ಕೃಪಾ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ನವೀನ್ ಪಡ್ನೂರು, ಹಾಗೂ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು