Sunday, November 24, 2024
ಸುದ್ದಿ

ಶಾಲಾ ಬಾಲಕರಿಂದ ಸಹಪಾಠಿ ಮೇಲೆ ತರಗತಿ ಕೊಠಡಿಯಲ್ಲೇ ಗ್ಯಾಂಗ್ ರೇಪ್ – ಕಹಳೆ ನ್ಯೂಸ್

ಮಹಾರಾಷ್ಟ್ರ; ಮುಂಬೈನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಎಂಟನೇ ತರಗತಿಯ ವಿದ್ಯಾರ್ಥಿನಿ ಮೇಲೆ ಇಬ್ಬರು ವಿದ್ಯಾರ್ಥಿಗಳು ಅತ್ಯಾಚಾರ ಎಸಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನ ಶಾಲೆಯೊಂದರ ತರಗತಿಯೊಳಗೆ 13 ವರ್ಷದ ಬಾಲಕಿಯ ಮೇಲೆ ಆಕೆಯ ಇಬ್ಬರು ಸಹಪಾಠಿಗಳು ಅತ್ಯಾಚಾರವೆಸಗಿದ್ದಾರೆ. ಸಹಪಾಠಿಗಳು ನೃತ್ಯ ಅಭ್ಯಾಸಕ್ಕಾಗಿ ತರಗತಿಯಿಂದ ಹೊರಬಂದಾಗ ಆರೋಪಿ ಬಾಲಕರು ಪರಿಸ್ಥಿತಿಯ ಲಾಭ ಪಡೆದು ಬಾಲಕಿಯ ಮೇಲೆ ರೇಪ್ ಮಾಡಿದ್ದಾರೆ.

ಘಟನೆಯು ಬಾಲಕಿಗೆ ಆಘಾತವನ್ನುಂಟು ಮಾಡಿತ್ತು. ಮತ್ತು ಅವಳು ತನ್ನ ಕುಟುಂಬದ ಸದಸ್ಯರಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ.ತಕ್ಷಣ ಕುಟುಂಬದ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿ, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಾಲಕರ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 DA (ಹದಿನಾರು ವರ್ಷದೊಳಗಿನ ಮಹಿಳೆಯ ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತ ಆರೋಪಿಗಳನ್ನು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ದಕ್ಷಿಣ ಮುಂಬೈನಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.