Sunday, January 19, 2025
ಸುದ್ದಿ

ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಹಿರಿಯರ ಕ್ರೀಡಾ ಸಂಘದ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 17ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ಶ್ರೀ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದಜಿಗಿತದಲ್ಲಿ ದ್ವಿತೀಯ ಹಾಗೂ ಜಾವೆಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಕೋಲಾರದಲ್ಲಿನಡೆಯುವ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದ ನಿವಾಸಿಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು