Recent Posts

Sunday, January 19, 2025
ಸುದ್ದಿ

ಬೆಳ್ತಂಗಡಿ : ಎರ್ಮಾಯಿ ಫಾಲ್ಸ್ ಗೆ ಸ್ನೇಹಿತರ ಜೊತೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು –ಕಹಳೆ ನ್ಯೂಸ್

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನಕ್ಕೆ ಇಳಿದಿದ್ದ ‌ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಜಿರೆಯ ಖಾಸಗಿ ಪದವಿ ಪೂರ್ವ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳು ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ ಹೋಗಿ, ತೊಟ್ಲಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ, ವಿದ್ಯಾರ್ಥಿ ವಿವೇಕ್ (17) ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಆಳವಾದ ಹೊಂಡದಲ್ಲಿ ಸಿಲುಕಿ ಮೃತಪಟ್ಟಿದ್ದಾನೆ.

ಈ ಸಂದರ್ಭದಲ್ಲಿ ಜೊತೆಯಲ್ಲಿದ್ದವರು ರಕ್ಷಣೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ತಕ್ಷಣ ಜೊತೆಯಲ್ಲಿದ್ದವರು ಬೊಬ್ಬೆ ಹೊಡೆದಾಗ ಸ್ಥಳೀಯರೊಬ್ಬರ ಸಹಕಾರದಲ್ಲಿ ವಿದ್ಯಾರ್ಥಿಯನ್ನು ಮೇಲೆತ್ತಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.