Monday, January 20, 2025
ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಸಂಘದ ವತಿಯಿಂದ ವಾರ್ಷಿಕ ಶಿಕ್ಷಣ ನೀತಿ – 2020 ಕುರಿತ ಒಂದು ದಿನದ ಕಾರ್ಯಾಗಾರ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ಸಂಘದ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತ ಒಂದು ದಿನದ ಕಾರ್ಯಾಗಾರ ಹಾಗೂ ಸಂಘದ ವಾರ್ಷಿಕ ಅಧಿವೇಶನವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸಂತ ಅಲೋಶಿಯಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ರಾಜ್ಯಮಟ್ಟದ ಭೌತಶಾಸ್ತ್ರ ಪಠ್ಯಕ್ರಮ ಮಂಡಳಿಯ ಸದಸ್ಯ ಡಾ. ನಾರಾಯಣ ಭಟ್, ಭೌತಶಾಸ್ತ್ರ ಪಠ್ಯಕ್ರಮದ ರೂಪುರೇμÉ, ಉದ್ಯೋಗಾವಕಾಗಳು ಹಾಗೂ ಪ್ರಯೋಗಗಳ ಬಗ್ಗೆ ಮಾಹಿತಿ ನೀಡಿದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ ವಿ ರಾವ್ ಮುಖ್ಯ ಅತಿಥಿಯಾಗಿದ್ದರು.

ಸಂಘದ ವತಿಯಿಂದ ಸಂತ ಅಲೋಶಿಯಸ್ ಕಾಲೇಜಿನ ಪ್ರಾಧ್ಯಾಪಕರಾಗಿ ನಿವೃತ್ತರಾದ ಡಾ. ಪ್ರಕಾಶ್ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಭೌತಶಾಸ್ತ್ರ ಸಂಘದ 2022- 23 ನೇ ಸಾಲಿನ ಅಧ್ಯಕ್ಷರಾಗಿ ನರಸಿಂಹ ಭಟ್ ಅವರನ್ನು, ಕಾರ್ಯದರ್ಶಿಯಾಗಿ ವೆಂಕಟೇಶ್ ಭಟ್ ಅವರನ್ನು ಹಾಗೂ ಖಜಾಂಜಿಯಾಗಿ ಪೆÇ್ರ. ಶೈಲಜಾ ಹೆಚ್ ಅವರನ್ನು ಆಯ್ಕೆ ಮಾಡಲಾಯಿತು.

ಭೌತಶಾಸ್ತ್ರ ಸಂಘದ ಅಧ್ಯಕ್ಷೆ ಅರುಣಾ ಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು. ಸಂತ ಅಲೋಶಿಯಸ್ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಈಶ್ವರ ಭಟ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ವೆಂಕಟೇಶ್ ಭಟ್ ಧನ್ಯವಾದ ಸಮರ್ಪಿಸಿದರು. ಸದಸ್ಯೆ ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರೂಪಿಸಿದರು.