Monday, November 25, 2024
ಸುದ್ದಿ

ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು : ಇದೇನ್ ಸಮಾಚಾರ ಅಂತೀರಾ..? –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಒಂದೇ ವ್ಯಕ್ತಿಯನ್ನು ಮದುವೆ ಆಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಗಿದೆ.
ಒಬ್ಬನನ್ನೆ ಇಬ್ಬರು ಯುವತಿಯರು ವಿವಾಹವಾಗೋದಿಕ್ಕೆ ಒಂದು ಕಾರಣನೂ ಇದೆ. ಹೌದು, ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಕಾರಣ, ಒಬ್ಬರನ್ನೊಬ್ಬರು ಬಿಟ್ಟು ದೂರ ಇರಲಾಗದೇ ಇಬ್ಬರು ಸಹೋದರಿಯರು ಅತುಲ್ ಅವರನ್ನು ಮದುವೆಯಾಗಲು ನಿರ್ಧರಿಸಿದ್ದಾರೆ.

ಅತುಲ್ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಕೆಲ ದಿನಗಳ ಹಿಂದೆ ತಂದೆ ನಿಧನರಾದ ಹಿನ್ನೆಲೆಯಲ್ಲಿ ಸಹೋದರಿಯರು ತಾಯಿಯೊಂದಿಗೆ ವಾಸವಾಗಿದ್ದರು. ಯಾವಾಗ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿತು. ಆಗ ಅತುಲ್ ಕಾರಿನಲ್ಲಿ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ, ಹೀಗಾಗಿ ಇಬ್ಬರು ಒಬ್ಬನನ್ನೆ ವಿವಾಹವಾಗಲೂ ತೀರ್ಮಾನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಿವಾದಾತ್ಮಕ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಆದ್ರೆ ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.