Wednesday, January 22, 2025
ಸುದ್ದಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕುರಿತು ಸಭೆ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2022- 23 ನೇ ಸಾಲಿನಲ್ಲಿ ಕರ್ನಾಟಕದ
ಮೂರು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ
ಕೈಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಡಿ.05 ರಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ತಿಮ್ಮಪ್ಪ ಶೆಟ್ಟಿ, ಚನಿಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಹಾಜರಿದ್ದ ಮೂರು ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳ ಅಭಿಯಂತರರಿಂದ ಮಾಹಿತಿ ಪಡೆದ ಅಧ್ಯಕ್ಷರು, ಎಲ್ಲಾ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಕ್ರಮವಹಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಶ್ರೀಮತಿ ಕೇಸರಿ ಯುವರಾಜ್, ಶ್ರೀ ಸಂಜೀವ ಪೂಜಾರಿ, ಶ್ರೀ ಮಂಜುನಾಥ್ ಜನ್ನು ಹಾಗೂ ಶ್ರೀ ವಿಜಯ್ ಕುಮಾರ್ ನಾಯ್ಕ, ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀ ಪುದೀಪ್ ಡಿಸೋಜ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್ ಶೆಟ್ಟಿ, ಹಾಗೂ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.