Sunday, November 24, 2024
ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಗಣಿತದ ವಿಸ್ಮಯ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ನಮಗೆ ತಿಳಿದಿರುವ ವಿಚಾರಗಳನ್ನು ನಾವು ಇತರರೊಂದಿಗೆ ಹಂಚಿಕೊಳ್ಳಬೇಕು. ಮುಚ್ಚಿಟ್ಟ ಜ್ಞಾನ ಕೊಳೆಯುತ್ತದೆ. ಬಿಚ್ಚಿಟ್ಟ ಜ್ಞಾನ ಬೆಳೆಯುತ್ತದೆ. ಹಾಗಾಗಿ ಜ್ಞಾನವನ್ನು ಹಂಚಿಕೊಳ್ಳುವುದರ ಮೂಲಕ ನಿಮ್ಮ ಜ್ಞಾನವನ್ನೂ ವೃದ್ಧಿಸಿಕೊಳ್ಳಿ ಎಂದು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ವಿಭೂಷಿತ, ಮಾನವ ಕಂಪ್ಯೂಟರ್ ಬಸವರಾಜ ಶಂಕರ ಉಮ್ರಾಣಿ ಹೇಳಿದರು. ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ಗಣಿತದ ವಿಸ್ಮಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಣಿತದ ಸೂತ್ರವನ್ನು ಸರಿಯಾಗಿ ಅರ್ಥ ಮಾಡಿಕೊ0ಡರೆ ಯಾರು ಬೇಕಾದರೂ ಅದರಲ್ಲಿ ಸಾಧನೆ ಮಾಡಬಹುದು. ವಿದ್ಯಾರ್ಥಿಗಳ ಓದಿಗೆ ಅನುಕೂಲಕರ ವಾತಾವರಣ ಕಲ್ಪಿಸಿಕೊಡಲು ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಅವರು ಈ ಸುಂದರವಾದ ಕ್ಯಾಂಪಸ್ ನಿರ್ಮಾಣ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಇಂತಹ ಅನೇಕ ಕಾರ್ಯಕ್ರಮಗಳನ್ನು ಅವರು ಸಂಸ್ಥೆಯಲ್ಲಿ ಆಯೋಜಿಸಿದ್ದಾರೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನಡೆಸಲಾಗಿರುವ ಇಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವ ಸಂಸ್ಥೆಯ ಬೆಳವಣಿಗೆ ಶ್ಲಾಘನೀಯ. ಇನ್ನು ಮುಂದಿನ ವರ್ಷಗಳಲ್ಲಿ ಈ ಸಂಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎಕ್ಸಲೆಂಟ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಮಾತನಡುತ್ತಾ, ವಿದ್ಯಾರ್ಥಿಗಳು ಸದಾ ಕಲಿಯುವ ಮನಸ್ಸನ್ನು ಬೆಳೆಸಿಕೊಳ್ಳಬೇಕು. ಬಸವರಾಜ ಶಂಕರರಂತಹ ಪ್ರತಿಭಾನ್ವಿತ ಸಂಪನ್ಮೂಲ ವ್ಯಕ್ತಿಗಳಿಂದ ಕಲಿಯುವ ಅವಕಾಶ ಒದಗಿದಾಗ ಅದರ ಸಂಪೂರ್ಣ ಸದುಪಯೋಗವನ್ನು ಪಡೆದುಕೊಂಡು ಜೀವನದಲ್ಲಿ ಔನ್ನತ್ಯವನ್ನು ಹೊಂದಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗಣಿತಕ್ಕೆ ಸಂಬಂಧಿಸಿದಂತಹ ಅನೇಕ ಕ್ಲಿಷ್ಟಕರ ಸಮಸ್ಯೆಗಳನ್ನು ಪರಿಹರಿಸುವ ಪ್ರಾತ್ಯಕ್ಷಿಕೆ ನಡೆಯಿತು. ಹಾಗೆಯೇ ವಿದ್ಯಾರ್ಥಿಗಳ ಜೊತೆ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಸವರಾಜ ಶಂಕರ ಉಮ್ರಾಣಿಯವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಗಣಿತಶಾಸ್ತ್ರದ ಮುಖ್ಯಸ್ಥ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಶಿಕ್ಷಕ ಜಯಶೀಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.