Recent Posts

Sunday, January 19, 2025
ಸುದ್ದಿ

ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಯತ್ನ; ಗೌರಿ ಹಂತಕರಿಂದ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು: ಗೌರಿ ಹಂತಕರು ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೂ ಸಂಚು ರೂಪಿಸಿದ್ದರು ಎನ್ನುವ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ವಿಚಾರಣೆ ವೇಳೆ ಗೌರಿ ಹಂತಕರು ಮಾಹಿತಿಯನ್ನು ಬಾಯಿ ಬಿಟ್ಟಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಬಳಿಕ ವಿಚಾರವಾದಿ, ಮಂಗಳೂರು ನಿವಾಸಿ ನರೇಂದ್ರ ನಾಯಕ್ ಅವರನ್ನು ನಗರದಲ್ಲಿ ಹತ್ಯೆ ಮಾಡುವ ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡದ (ಎಸ್‍ಐಟಿ) ಅಧಿಕಾರಿಗಳ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹತ್ಯೆ ಮಾಡುತ್ತಿದ್ದರು ಎನ್ನುವ ಮಾಹಿತಿ ಗೊತ್ತಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ನಾಯಕ್, ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ನನ್ನನ್ನು ಸುಮ್ಮನಿರಸಲು ಯಾರಿಂದಲೂ ಸಾಧ್ಯವಿಲ್ಲ, ಆತ್ಮೀಯ ಗೆಳೆಯರಾದ ನರೇಂದ್ರ ದಾಬೋಲ್ಕರ್, ಎಂ.ಎಂ.ಕಲ್ಬುರ್ಗಿ, ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಿದ್ದಾರೆ. ನನ್ನ ಹೆಣ ಬೀಳುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು