Monday, January 20, 2025
ಸುದ್ದಿ

ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ : ಪುಂಜಾಲಕಟ್ಟೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಕೀಲರ ಸಂಘದಿ0ದ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿನ ಯುವ ವಕೀಲ‌ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಡಿ.7 ರಂದು ಪುತ್ತೂರು ತಾಲೂಕು ಆಡಳಿ ಸೌಧದ ಎದುರು ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿ ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿ ಉಟ್ಟ ಬಟ್ಟೆಯಲ್ಲೇ ಕುಲದೀಪ್ ಶೆಟ್ಟಿಯವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ಪೊಲೀಸರ ಈ ವರ್ತನೆಯನ್ನು ಪುತ್ತೂರು ವಕೀಲರ ಸಂಘ ಖಂಡಿಸುತ್ತದೆ ಎಂದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಜಯಾನಂದ ಮಾತನಾಡಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜೊತೆ ಕಾರ್ಯದರ್ಶಿ ಸೀಮಾ ನಾಗರಾಜ್, ಖಜಾಂಜಿ ಶ್ಯಾಮಪ್ರಸಾದ್ ಕೈಲಾರ್ ಸಹಿತ ವಕೀಲರ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯ ಕಮೀಷನರ್ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.