ನರೇಂದ್ರ ಪ.ಪೂ.ಕಾಲೇಜಿನಲ್ಲಿ ಜಾಗತಿಕ ಏಡ್ಸ್ ದಿನದ ಪ್ರಯುಕ್ತ ಏಡ್ಸ್ ಅರಿವು ಬಗ್ಗೆ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್
ಪುತ್ತೂರು: ಪ್ರತಿ ವರ್ಷ ಡಿ. 01 ರಂದು ವಿಶ್ವ ಏಡ್ಸ್ ದಿನವನ್ನು ಆಚರಣೆ ಮಾಡಲಾಗುತ್ತದೆ. ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಅದು ಹೆಚ್.ಐ. ವಿ / ಏಡ್ಸ್. ಇದು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ. ಹೀಗಾಗಿ ಈ ಸೋಂಕಿಗೊಳಗಾದವರು ನಡೆಸುವ ಹೋರಾಟದ ಯಶಸ್ಸಿಗೆ ಧೈರ್ಯ ತುಂಬಲು ಸಂಕಲ್ಪವನ್ನು ಮಾಡುವಂತಹ ಮಹತ್ವದ ದಿನ ವಿಶ್ವ ಏಡ್ಸ್ ದಿನವಾಗಿದೆ. “ಎಂದು ಪುತ್ತೂರಿನ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಡಾ.ಮಸ್ಕರೇನಸ್ ಪ್ಯಾಟ್ರಿಕ್ ಸಿಪ್ರಿಯಾನ್ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವ್ಯಕ್ತಿಗತ ಮತ್ತು ಸಮುದಾಯದಲ್ಲಿ ಈ ಸೋಂಕಿನಿಂದ ಉಂಟಾಗುತ್ತಿರುವ ಸಮಸ್ಯೆಗಳು ಮತ್ತು ಇದರ ಬಗ್ಗೆ ಜಾಗೃತಿ ಹೆಚ್ಚಿಸುವುದು ಹಾಗೂ ಹೆಚ್.ಐ.ವಿ. ಸೋಂಕಿತರಾಗಿರುವರಿಗೆ ಬೆಂಬಲ ನೀಡುವುದು ಮತ್ತು ಅವರು ಅನುಭವಿಸುತ್ತಿರುವ ಕಳಂಕ ತಾರತಮ್ಯವನ್ನು ಕಡಿಮೆ ಮಾಡುವುದು ಹಾಗೂ ಹೆಚ್.ಐ.ವಿ. ಏಡ್ಸ್ ಬೆಳವಣಿಗೆಯತ್ತ ದೃಷ್ಟಿ ಬೀರಿ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳತ್ತ ಪ್ರತಿಯೊಬ್ಬರ ಗಮನ ಸೆಳೆಯುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. “ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭೋಗ್, ಪುತ್ತೂರಿನ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ,ನಿರ್ದೇಶಕರಾದ ನವೀನ್‍ಚಂದ್ರ ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸುಮಾ ಭಟ್ ಸ್ವಾಗತಿಸಿ ವಂದಿಸಿದರು.