Wednesday, January 22, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ : ಮಗು ಸಹಿತ ದಂಪತಿ ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಾಗರಾಜ್ (40), ಪ್ರತ್ಯುಷಾ(32) ಮತ್ತು 2 ವರ್ಷದ ಮಗು ಮೃತ ದುರ್ದೈವಿಗಳು.

ಆಂಧ್ರಪ್ರದೇಶದ ಮೂಲದ ಕುಟುಂಬ ಕಾರಿನಲ್ಲಿ ಧರ್ಮಸ್ಥಳದಿಂದ ಶೃಂಗೇರಿ ಹೋಗುತ್ತಿತ್ತು. ಮಾರ್ಗಮಧ್ಯೆ ಕಾರು ಮತ್ತು ಬಸ್​ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ದುರಂತ ಅಂತ್ಯ ಕಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.