Monday, November 25, 2024
ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ದಶಮ ಸಂಭ್ರಮಾಚರಣೆಯ ಸಂಭ್ರಮದಲ್ಲಿ¸ಸಾಧಕರ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡುಬಿದಿರೆಯ: ಇಲ್ಲಿನ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ದಶಮ ಸಂಭ್ರಮಾಚರಣೆಯ ಸಂಭ್ರಮದಲ್ಲಿಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಸಚಿವರು, ಕೇವಲ ಒಂದು ಮಗುವನ್ನು ಬೆಳೆಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಯಾವುದೇ ಗುಣಮಟ್ಟಕ್ಕೆ ಕೊರತೆಯಾಗದಂತೆ ಎಕ್ಸಲೆಂಟ್ ವಿದ್ಯಾಸಂಸ್ಥೆ ಈ ಹತ್ತು ವರ್ಷದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಿದೆ. ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಗಾಧವಾದ ಶಕ್ತಿಯಿರುತ್ತದೆ.
ವ್ಯಕ್ತಿಯಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಹೊರತರುವುದೇ ಶಿಕ್ಷಣದ ಉದ್ದೇಶ. ಭಾರತೀಯ ಸಂಸ್ಕೃತಿಯಾದ ಯೋಗ, ಧ್ಯಾನ, ಪ್ರಾರ್ಥನೆ ಮುಂತಾದ ಚಟುವಟಿಕೆಗಳನ್ನು ಸಂಸ್ಥೆಯಲ್ಲಿ ನಡೆಸುತ್ತಾ ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.
ನಮ್ಮ ದೇಶ ಯಶಸ್ವಿಯಾಗಿ ಕೊರೋನಾವನ್ನು ಎದುರಿಸಿದೆ. ಇಡೀ ಪ್ರಪಂಚದಲ್ಲಿ ಬೇರೆ ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡಿ ಶಕ್ತರನ್ನಾಗಿಸುವ ಶಕ್ತಿ ಇದ್ದರೆ ಅದು ಭಾರತಕ್ಕೆ ಮಾತ್ರ. ಎಕ್ಸಲೆಂಟ್ ನಂಥಹ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರವನ್ನು ನೀಡುವುದರ ಮೂಲಕ ಭವಿಷ್ಯಕ್ಕೆ ಭರವಸೆಯನ್ನು ನೀಡಿದೆ ಎಂದರು.

ಇನ್ನೋರ್ವ ಅತಿಥಿ, ಮೂಲ್ಕಿ-ಮೂಡುಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್ ಮಾತನಾಡುತ್ತಾ, ಶಿಕ್ಷಣ ಸಚಿವರಿಂದ ಸನ್ಮಾನಕ್ಕೊಳಪಟ್ಟ ವಿದ್ಯಾರ್ಥಿಗಳಿಗೆ ಇದು ಬಹಳ ಮಹತ್ವದ ದಿನ ಎಂದರು. ತಮ್ಮ ಕ್ಷೇತ್ರದ ಬಡ ಜನರಿಗೆ ಅನುಕೂಲವಾಗುವಂತೆ ಒಂದು ಸರಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜು ಆರ0ಭಿಸಲು ಸಹಕರಿಸಿದ ಶಿಕ್ಷಣ ಸಚಿವರಿಗೆ ಕೃತಜ್ಞತೆ ತಿಳಿಸುತ್ತಾ ಅವರ ಸರಳ ಜೀವನವೇ ಇತರರಿಗೆ ಮಾದರಿ ಎಂದರು.
ನೀಟ್ ಪರೀಕ್ಷೆಯ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಪಡೆದ ಎ ಎಫ್ ಎಂ ಸಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದ ರಾಜೇಶ್ ಪರಶ್ರಾಮ್ ಗೆ ಸ0ಸ್ಥೆಯ ವತಿಯಿಂದ ಸನ್ಮಾನಿಸಿ ಐವತ್ತು ಸಾವಿರ ರೂಪಾಯಿಗಳ ನಗದು ಬಹುಮಾನ ವಿತರಿಸಲಾಯಿತು. ಹಾಗೆಯೇ ನೀಟ್ ಪರೀಕ್ಷೆಯ ಮೂಲಕ ಪ್ರತಿಷ್ಟಿತ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಮೂಲಕ ಸೀಟು ಪಡೆದುಕೊಂಡ ಹನ್ನೊಂದು ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಬಿ ಸಿ ನಾಗೇಶ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಮೂಡುಬಿದಿರೆಯ ಹಿರಿಯ ವಕೀಲ, ಬಾಹುಬಲಿ ಪ್ರಸಾದ, ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಯುವರಾಜ ಜೈನ್, ಪಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್ ಜೈನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.