Recent Posts

Sunday, January 19, 2025
ರಾಜಕೀಯ

ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರರಂತೆ ಎಂದು ಟೀಕಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಮಂಗಳೂರು, ಅ 7: ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿ‌ಎಸ್ ಮತ್ತು ಕಾಂಗ್ರೆಸ್ಸಿನ ಮೈತ್ರಿ ಸರಕಾರ ದಿನಕೂಲಿ ನೌಕರನಂತಿದೆ. ಈ ಸರಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಟೀಕಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ಕುಮಾರ್ ಕಟೀಲು ನಂಬರ್ ಸಂಸದ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಆದರೆ ಇವರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ನಾಲ್ಕು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಮುದ್ರಾ ಯೋಜನೆಯ ಲಾಭ ದೊರಕಿಸಿಕೊಟ್ಟಿದ್ದಾರೆ ಎಂದರು. ಇನ್ನು 8075 ಮಂದಿಗೆ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೂ ಅನುದಾನ ಕೊಡಿಸಿದ್ದಾರೆ. ಪಂಪ್ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ರಾಜಕೀಯ ವಿರೋಧಿಗಳು ಇವರ ಬಗ್ಗೆ ಫೇಕ್ ಅಕೌಂಟ್ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು