ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ನೇಮಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಮನವಿ – ಕಹಳೆ ನ್ಯೂಸ್
ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳವನ್ನು ನೇಮಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರಕ್ಕೆ ಮನವಿಯನ್ನ ಮಾಡಿದ್ದಾರೆ.
ಹೊನ್ನಾವರ-ಕುಮಟಾ ಕ್ಷೇತ್ರದ ಶಾಸಕರಾದ ದಿನಕರ್ ಶೆಟ್ಟಿ ಇವರಿಗೆ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮನವಿ ಮಾಡಿದ್ದು ಈ ಮನವಿಯನ್ನ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಲವ್ ಜಿಹಾದ್ ತಡೆಗೆ ವಿಶೇಷ ತಂಡ ರಚಿಸುವಂತೆ ಮಾಡಲು ಮನವಿ ಮಾಡಿದ್ದಾರೆ.